ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ಪ್ರಯಾಣಿಕರು ಪಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡುಗಲ್ಲು ಸಮೀಪ ನಡೆದಿದೆ.

ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು ರಸ್ತೆಯ ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಮಣ್ಣಿನ ಬರೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯರು ಕಾರಿನಲ್ಲಿದ್ದ ರವಿಪ್ರಸಾದ್, ಅವರ ಪತ್ನಿ ಮತ್ತು ಮಗುವನ್ನು ರಕ್ಷಿಸಿದ್ದಾರೆ. ರವಿಪ್ರಸಾದ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply