October 24, 2025
WhatsApp Image 2024-12-23 at 10.36.11 AM

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ಕಾಮುಕನೋರ್ವನು ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ‌ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಾವೂರ ನಿವಾಸಿ ಜಯಂತ ಬಂಧಿತ ಕಾಮುಕ. ಡಿ.14ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಹಾಗೂ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Leave a Reply