October 27, 2025
WhatsApp Image 2024-12-27 at 3.40.22 PM

ಮಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Dr.Manmohan Singh) ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಮಂಗಳೂರಿನಲ್ಲಿ ನಡೆಯಬೇಕಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.
ಬೀಚ್ ಉತ್ಸವದ‌ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

About The Author

Leave a Reply