ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆಂದು ತಿಳಿದು ಬಂದಿದೆ.
ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಮೃತಹೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.