ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ: ಆರ್ಥಿಕ ಕ್ರಾಂತಿಕಯ ಹರಿಕಾರ ಇನ್ನೂ ನೆನಪು ಮಾತ್ರ

ನವದೆಹಲಿ: ಡಿ.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಮೂಲಕ ಆರ್ಥಿಕ ಅಭಿವೃದ್ಧಿಯ ಹರಿಕಾರ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ಇನ್ನೂ ನೆನಪಾಗಿ ಉಳಿದಂತೆ ಆಗಿದೆ.

ಇದಕ್ಕೂ ಮುನ್ನ ಇಂದು ದೆಹಲಿಯಲ್ಲಿರುವಂತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಅಂತಿಮ ದರ್ಶನವನ್ನು ಪಡೆದರು.

ಎಐಸಿಸಿ ಕಚೇರಿಯಿಂದ ತೆರೆದ ವಾಹನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರವನ್ನು ಅಂತಿಮ ಯಾತ್ರೆಯಲ್ಲಿ ನಿಗಮ್ ಬೋಧ್ ಘಾಟ್ ಗೆ ಕೊಂಡೊಯ್ಯಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಸೇರಿದಂತೆ ಇತರೆ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರರದ ಅಂತ್ಯ ಕ್ರಿಯೆ ನೆರವೇರಿಸಲಾಯಿತು.

Leave a Reply