December 21, 2025
dmdm
ಉಡುಪಿ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂ ಡಿ ಎಂ ಎ ಪೌಡರ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್‌ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಹಾಗೂ ಉಚ್ಚಿಲದ ಮುಕ್ದುಮ್ ಅಲಿ(28)‌ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ  ಎಂಡಿಎಂಎ 69.127 ಗ್ರಾಂ , 6 ಮೊಬೈಲ್ ಪೋನ್, 1100ರೂ. ನಗದು, ಕಾರು, ಲ್ಯಾಪ್‌ಟಾಪ್ ಮತ್ತು ಇತರ ಸೊತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ 20,11,900ರೂ. ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ ಟಿ , ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ (ಪ್ರಭಾರ) ರಾಮಚಂದ್ರ ನಾಯಕ್, ಉಡುಪಿ ನಗರ ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಪುನೀತ್‌ ಕುಮಾರ್‌ ಬಿ, ಸುರೇಶ್.ಕೆ, ಅಬ್ದುಲ್ ಬಶೀರ್, ಹೇಮಂತ, ಆನಂದ, ಶಿವಕುಮಾರ್, ಸೆನ್ ಅಪರಾಧ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ರಾಘವೇಂದ್ರ, ಮಾಯಪ್ಪ, ಪ್ರಶಾಂತ್ ಅವರನ್ನೊಳಗೊಂಡ ತಂಡ ಪಾಲ್ಗೊಂಡಿದೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸಿದ್ದಾರೆ.

About The Author

Leave a Reply