ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಮ್.ಎ. ಮೌಲಾ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮೌಲಾ ಉಡುಪಿ ಆಯ್ಕೆಯಾಗಿದ್ದಾರೆ. ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮಹಾಸಭೆಯಲ್ಲಿ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಎಂ.ಎ. ಮೌಲಾ ಅವರು ಉಡುಪಿಯ ಖ್ಯಾತ ಉದ್ಯಮಿಯಾಗಿದ್ದು ವಿವಿಧ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಮುದಾಯಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಹಿಂದೆ 2 ಬಾರಿ ಅವರು ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಒಂದು ಬಾರಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾಗಿ ಕೇಂದ್ರೀಯ ಮಟ್ಟದಲ್ಲಿ ಯಾಸೀನ್ ಮಲ್ಪೆ, ಇದ್ರೀಸ್ ಹೂಡೆ, ಇಕ್ಬಾಲ್ ಕಟಪಾಡಿ, ರಫೀಕ್ ಗಂಗೊಳ್ಳಿ ಮತ್ತು ಮೌಲಾನಾ ಝಮೀರ್ ಅಹ್ಮದ್ ರಶಾದಿ ಕಂಡ್ಲೂರು ಆಯ್ಕೆಯಾದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳಾಗಿ ತೌಫೀಕ್ ಅಬ್ದುಲ್ಲಾ ನಾವುಂದ, ಡಾ. ಅಬ್ದುಲ್ ಅಝೀಝ್ ಮಣಿಪಾಲ್, ಅಬ್ದುರ್ರಹ್ಮಾನ್ ಕನ್ನಂಗಾರ್ ಮತ್ತು ಖಾಲಿದ್ ಮಣಿಪುರ ನೇಮಿಸಲ್ಪಟ್ಟರು.

Leave a Reply