
ಬೆಂಗಳೂರು : ಆಸ್ತಿ ಘೋಷಣೆ ಮಾಡದ ಜನಪ್ರತಿನಿಧಿಗಳಿಗೆ ಚುನಾವಣಾ ಆಯೋಗವು ಬಿಗ್ ಶಾಕ್ ನೀಡಿದ್ದು, ರಾಜ್ಯದ 6 ಗ್ರಾಮಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ.



ಆಸ್ತಿ ಘೋಷಣೆ ಸಂಬಂಧ ಈ ಸದಸ್ಯರಿಗೆ ನೋಟಿಸ್ ನೀಡಿದಾಗಲೂ ಯಾವುದೇ ಉತ್ತರ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಗೊಳ್ಳಲಾಗಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದೂ ಘೋಷಿಸಿದೆ.
ಚಿಕ್ಕಮಗಳೂರು ಜಿಲ್ಲೆ ಅತ್ತಿಕೊಡಿಗೆ ಗ್ರಾಮ ಪಂಚಾಯಿತಿಯ ಚೈತ್ರಾ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯಿತಿಯ ಎಸ್.ಎಚ್.ಚಂದ್ರಶೇಖರ್, ಕಲಬುರಗಿ ಜಿಲ್ಲೆ ಅಳಂದ ಆಲೂಕು ಅಳಂಗಾ ಗ್ರಾಮ ಪಂಚಾಯಿತಿಯ ಗಣಪತಿ, ಕಮಲಾಪೂರ ತಾಲೂಕು ವ್ಹಿ.ಕೆ.ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಸಾಬ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ ಹುಳ್ಳಿ ಹಾಗೂ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ ಆಸ್ತಿ ಘೋಷಣೆ ಮಾಡಿಕೊಳ್ಳದ ಸದಸ್ಯರ ಸದಸ್ಯತ್ವ ರದ್ದತಿಗೆ ಅವಕಾಶವಿದೆ.