October 12, 2025
WhatsApp Image 2025-01-02 at 9.24.44 AM

ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ.

ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.

ಬಿಜೆಪಿ ಯಾವುದೇ ಪ್ರಕರಣವನ್ನು ಸಿಬಿಐ ಗೆ ವಹಿಸಿಲ್ಲ

ಬಿಜೆಪಿಯವರು ತನಿಖೆಯನ್ನು ಸಿಬಿಐ ಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

ಸಿ.ಟಿ.ರವಿ ಪ್ರಕರಣ ಸಿಐಡಿ ತನಿಖೆ

ಎಂಎಲ್ ಸಿ ಸಿ.ಟಿರವಿಯವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.ಹೊಸ ವರ್ಷದ ಸಂದರ್ಭದಲ್ಲಿ ವಿರೋಧ ಪಕ್ಷದವರಿಗೆ ಭಗವಂತ ಸದ್ಭುದ್ಧಿಯನ್ನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು , ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

About The Author

Leave a Reply