
ಪ್ರಧಾನಿ ನರೇಂದ್ರ ಮೋದಿ ಅವರು ಅಜ್ಮೀರ್ ದರ್ಗಾಕ್ಕೆ ಚಾದರ್ ಕಳುಹಿಸಿದ್ದು, ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಯಾವುದೇ ಪ್ರಯೋಜನವಿಲ್ಲ. ಈಗಿರುವ ಮಸೀದಿಗಳು ಅಥವಾ ದರ್ಗಾಗಳ ವಿವಾದ ಕುರಿತು ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸುವುದನ್ನುತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಶುಕ್ರವಾರ ಹೇಳಿದ್ದಾರೆ. ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ ‘ಚಾದರ್’ ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು. ಈ ಕುರಿತು ಮಾತನಾಡಿದ ಓವೈಸಿ, ಈಗಿರುವ ಮಸೀದಿ, ದರ್ಗಾಗಳು ವಾಸ್ತವಿಕವಾಗಿ ಮಸೀದಿ, ದರ್ಗಾ ಅಲ್ಲ ಎಂದು ಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಗಳಿಗೆ ಸೇರಿದವರು ದೇಶದ ಹಲವು ಸ್ಥಳಗಳಲ್ಲಿ ಸಮೀಕ್ಷೆ ನಡೆಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಪ್ರಧಾನಿ ಬಯಸಿದರೆ ಈ ಎಲ್ಲ ಕೆಲಸಗಳನ್ನು ನಿಲ್ಲಿಸಬಹುದು ಎಂದು ಹೇಳಿದರು.


