
ಮಂಗಳೂರು : ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ.



ಗಾಯಗೊಂಡವರನ್ನು ಸಫ್ವಾನ್ ಎಂದು ಗುರುತಿಸಲಾಗಿದೆ. ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆಂದು ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್ ಎಂಬವರು ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ ಮೇಲಿಟ್ಟು ಶೂಟ್ ಮಾಡಿಕೊಂಡಿದ್ದಾರೆ. ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಪಡೀಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.