
ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಕಲ್ಲು ಕತ್ತರಿಸುವ ಯಂತ್ರದಿಂದ ದುಷ್ಕರ್ಮಿಗಳು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಹೌದು ಉತ್ತರಪ್ರದೇಶದ ಮೀರತ್‌ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ.



ಮೀರತ್‌ನ ಲಿಸಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಹೈಲ್ ಗಾರ್ಡನ್‌ನಲ್ಲಿ ಒಂದೇ ಕುಟುಂಬದ ಐವರ ಮೃತದೇಹಗಳು ಪತ್ತೆಯಾಗಿವೆ. ಕೊಲೆಯ ನಂತರ, ಮೃತ ದೇಹಗಳನ್ನು ಗೋಣಿಚೀಲಗಳಲ್ಲಿ ಮುಚ್ಚಿ ಹಾಸಿಗೆಗಳಲ್ಲಿ ಮರೆಮಾಡಲಾಗಿದೆ. ಬುಧವಾರದಿಂದ ಇಡೀ ಕುಟುಂಬ ನಾಪತ್ತೆಯಾಗಿತ್ತು ಎನ್ನಲಾಗಿದೆ.
ಗುರುವಾರ ರಾತ್ರಿ 9:30ಕ್ಕೆ ಅವರ ಸ್ವಂತ ಮನೆಯ ಕೊಠಡಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಹಾಸಿಗೆಯೊಳಗೆ ಚೀಲಗಳಲ್ಲಿ ತುಂಬಿತ್ತು. ಇವರಲ್ಲಿ ಮಕ್ಕಳೂ ಸೇರಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪೋಲೀಸರ ತನಿಖೆಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬುಧವಾರದಿಂದ ಇಡೀ ಕುಟುಂಬ ನಾಪತ್ತೆಯಾಗಿರುವುದಾಗಿ ನೆರೆಹೊರೆಯವರು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ.
ಯಾರೂ ಅವರನ್ನು ನೋಡಲಿಲ್ಲ. ಇಂದು ಮೃತದೇಹ ಪತ್ತೆಯಾಗಿರುವ ಸುದ್ದಿ ಬೆಳಕಿಗೆ ಬಂದಿದೆ.ಕೊಲೆ ಮಾಡಿ ಶವವನ್ನು ಹಾಸಿಗೆಯಲ್ಲಿ ಬಚ್ಚಿಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕೊಲೆಗೆ ಕಲ್ಲು ಕತ್ತರಿಸುವ ಯಂತ್ರ ಬಳಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಕೊಲೆಯ ಹಿಂದಿನ ಕಾರಣ ತಿಳಿಯಲಿದೆ. ಸದ್ಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ತನಿಖೆ ನಡೆಸಲಾಗುತ್ತಿದೆ.