ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ವಿದ್ಯಾರ್ಥಿಯೋರ್ವನ ಕೃತ್ಯ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ 12ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ವಿವಿಧ ಶಾಲೆಗಳಿಗೆ ಬಂದಿದ್ದ ಕೊನೆಯ 23 ಬಾಂಬ್ ಬೆದರಿಕೆ ಇ-ಮೇಲ್ ಗಳು 12ನೇ ತರಗತಿಯ ವಿದ್ಯಾರ್ಥಿಯೇ ಕಳುಹಿಸಿದ್ದು. ಆತ ಈ ಹಿಂದೆಯೂ ಬೆದರಿಕೆ ಇ-ಮೇಲ್ ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.
ಈ ಬಗ್ಗೆ ದೆಹಲಿ ದಕ್ಷಿಣ ಡಿಸಿಪಿ ಅಂಕಿತ್ ಚೌವ್ಹಾಣ್ ಮಾಹಿತಿ ನೀಡಿದ್ದಾರೆ.