
ಮಂಗಳೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ.



ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶ(13) ಮೃತಪಟ್ಟ ಬಾಲಕಿ. ಬೈಕ್ ಚಲಾಯಿಸುತ್ತಿದ್ದ ಬಾಲಕಿಯ ತಂದೆ ಅಬ್ದುರ್ರಹ್ಮಾನ್ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಮಲ್‌ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬವರ ಬೈಕ್ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಬರುತ್ತಿದ್ದ ಅಬ್ದುರ್ರಹ್ಮಾನ್ರ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ರಂಜಿತ್ ಕೂಡ ಗಾಯ ಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದೆ.ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್ಸೆ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.