August 30, 2025
WhatsApp Image 2025-01-19 at 9.21.51 AM

ರಿಯಾದಿನಲ್ಲಿ ಹಠಾತ್ ಅನಾರೋಗ್ಯಕ್ಕೊಳಗಾಗಿ ಮರಣ ಹೊಂದಿದ ಇಬ್ರಾಹಿಂ ರೆಂಗೇಲ್‌ರವರ ಅಂತ್ಯಕ್ರಿಯೆಯನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಚಿಕಿತ್ಸೆ ಫಲಿಸದೆ 11/01/2025ರಂದು ಮರಣ ಹೊಂದಿದ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ .

ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆ ಅಧ್ಯಕ್ಷರಾದ ಭಾಷಾ ಗಂಗಾವಳಿ ರಿಯಾದ್ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಮೃತರ ಕುಟುಂಬಸ್ಥರಾದ ಹಬೀಬ್ ಹಾಗೂ ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ. ಊರಿನಲ್ಲಿ ಮೃತರ ಸಹೋದರ ಎಲ್ಲಾ ರೀತಿಯಲ್ಲೂ ಸಹಕರಿಸಿದ್ದಾರೆ.

ರಿಯಾದಿನ ಅಲ್ ರಾಜಿ ಮಸ್ಜಿದ್‌ನಲ್ಲಿ ಮಯ್ಯಿತ್ ನಮಾಝ್ ನಿರ್ವಹಿಸಿ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಗೆ ಮೃತದೇಹವನ್ನು ಕೊಂಡೊಯ್ಯಲಾಯಿತು.

ನಸೀಂನಲ್ಲಿ ನಡೆದ ದಫನ್ ಕಾರ್ಯದ ನೇತೃತ್ವವವನ್ನು ಕೆಸಿಎಫ್ ರಿಯಾದ್ ಝೋನ್ ದಾಇ ಮುಸ್ತಫಾ ಸ‌ಅದಿ ವಹಿಸಿದ್ದರು ಹಾಗೂ ಕೆಸಿಎಫ್ ನಾಯಕರಾದ ಯೂಸುಫ್ ಹಾಜಿ ಕಳಂಜಿಬೈಲ್, ಬಶೀರ್ ತಲಪಾಡಿ, ನಝೀರ್ ಹಾಜಿ, ಖಲೀಲ್ ಝುಹ್ರಿ, ಅಶ್ರಫ್ ಗುರುಪುರ, ರಫೀಕ್ ಮದನಿ ಪಾಣೇಲ, ಫಾರೂಕ್ ಪಾಣೆಮಂಗಳೂರು ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು ಹಾಗೂ ಸ್ಥಳೀಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Leave a Reply