October 13, 2025
WhatsApp Image 2025-01-23 at 4.56.16 PM

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚಿಕ್ಕೋಡಿ ಡಿಪೊಗೆ ಸೇರಿದ ಬಸ್ ಬೆಳಗಾವಿ ಕಡೆಯಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದಾಗ ಸಾಣೂರು ರಾಮ ಮಂದಿರದ ಬಳಿ ನಿಂತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ಮತ್ತು ಚಾಲಕ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

About The Author

Leave a Reply