‘ಮೈಕ್ರೋ ಫೈನಾನ್ಸ್ ಕಂಪನಿ’ಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇಂದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಹೊಸ ಕಾನೂನು ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಹೇಳಿದ್ದಾರೆ.

ಅನಧಿಕೃತವಾಗಿ ವ್ಯವಹಾರ ನಡೆಸುತ್ತಿರುವಂತ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹೊಸ ಕಾನೂನನ್ನು ಕೂಡಲೇ ಜಾರಿಗೊಳಿಸುತ್ತೇವೆ. ಮೆಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಬ್ರೇಕ್ ಹಾಕಲಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಗಳು ಆರ್ ಬಿ ಐ ನಿಯಮಗಳ ಅಡಿಯಲ್ಲಿ ಬರುತ್ತವೆ. ಹೀಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಸಲಹೆ ಪಡೆಯುತ್ತೇವೆ. ಸಾಲ ಕೊಡಬೇಡಿ ಎಂದು ಯಾರಿಗೂ ಹೇಳುವುದಿಲ್ಲ. ಆದರೇ ವಸೂಲಿ ಮಾಡುವಾಗ ಕಿರುಕುಳ ಕೊಡಬಾರದು. ಆರ್ ಬಿ ಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆಯ ನಂತ್ರ ಸಾಲ ವಸೂಲಾಗಿಗೆ ಹೋಗಬಾರದು. ಸಾಲ ವಸೂಲಾತಿಗಾಗಿ ಔಟ್ ಸೋರ್ಸ್ ನೀಡಬಾರದು ಎಂದರು.

ಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದಾರೆ.

Leave a Reply