November 8, 2025
WhatsApp Image 2025-01-28 at 8.46.15 AM

ಮಂಗಳೂರು: ಸ್ಕೂಟರ್ ಅನ್ನು ಬಿಡುಗಡೆ ಮಾಡಲು 3ಸಾವಿರ ರೂ. ಸ್ವೀಕರಿಸುತ್ತಿದ್ದಾಗಲೇ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳೂರು ಉತ್ತರ ಸಂಚಾರಿ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್ ಲೋಕಾಯುಕ್ತ ಬಲೆಗೆ ಬಿದ್ದವರು. ವ್ಯಕ್ತಿಯೊಬ್ಬರು ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿತ್ತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್‌ರನ್ನು ಭೇಟಿ ಮಾಡಿದಾಗ 5000ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಈ ಅಷ್ಟೊಂದು ಹಣ ಕೊಡಲು ಸಾಧ್ಯವಿಲ್ಲ, ಕಡಿಮೆ ಮಾಡಿ ಎಂದಾಗ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್, ಠಾಣಾ ಬರಹಗಾರರಾದ ನಾಗರತ್ನರನ್ನು ಭೇಟಿ ಮಾಡಲು ತಿಳಿಸಿದ್ದಾರೆ. ಆದರೆ ನಾಗರತ್ನ ಅವಾಚ್ಯ ಶಬ್ದಗಳಿಂದ ಬೈದು 3000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ವ್ಯಕ್ತಿಗೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿದ್ದರು.

ಆದ್ದರಿಂದ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರೆ ನಾಗರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೋಮವಾರ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್ ಕೆ. ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ 3000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.

About The Author

Leave a Reply