November 8, 2025
WhatsApp Image 2025-01-28 at 5.51.46 PM

ಬೆಂಗಳೂರು : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು , ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

About The Author

Leave a Reply