November 8, 2025
WhatsApp Image 2025-01-31 at 10.46.10 AM

ಕಾರ್ಕಳ : ಶಾರ್ಟ್ ಸರ್ಕ್ಯೂಟ್ ನಿಂದ ಕುಶನ್ ಅಂಗಡಿ ಒಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಎಂಬಲ್ಲಿ ನಡೆದಿದೆ. ಈ ಒಂದು ಅಗ್ನಿ ಅವಘಡದಲ್ಲಿ ಅಂಗಡಿಯಲ್ಲಿದ್ದ ಸುಮಾರು 20 ಲಕ್ಷ ಮೌಲ್ಯದ ಕುಶನ್ ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಹೌದು ಶಾರ್ಟ್ ಸರ್ಕ್ಯೂಟ್ ನಿಂದ ಕುಶನ್ ಶಾಪ್ ಒಂದು ಹೊತ್ತಿ ಉರಿದಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಬಳಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಸದಾನಂದ ಅವರ ಸದಾ ಕುಶನ್ ಅಂಗಡಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಆಹುತಿಯಾಗಿದೆ. ಸುಮಾರು 20 ಲಕ್ಷ ಮೌಲ್ಯದ ಕುಶನ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply