August 30, 2025
WhatsApp Image 2025-01-31 at 2.15.23 PM

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜನವರಿ 30ರಂದು ಶಿಕ್ಷೆ ವಿಧಿಸಿ ಆದೇಶಿಸಿದೆ. ಆರೋಪ ಸಾಬೀತಾಗಿದ ಹಿನ್ನೆಲೆ ಕೋರ್ಟ್ ಶಿಕ್ಷೆ ವಿಧಿಸಿದ್ದು, ಶಿಕ್ಷೆಯ ಪ್ರಮಾಣವಿನ್ನು ಪ್ರಕಟವಾಗಿಲ್ಲ.

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಕುಮಾರ್ ಎಂಬುವವರಿಂದ ಕೃಷ್ಣ ಅವರು 2015ರಲ್ಲಿ 1.75 ಲಕ್ಷ ರೂ ಸಾಲ ಪಡೆದಿದ್ದರು. ಈ ಸಂಬಂಧ ಸ್ನೇಹಮಯಿ ಕೃಷ್ಣ ಅವರು ಕೋ ಆಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು. ಈ ಚೆಕ್‌ಅನ್ನು ಕುಮಾರ್ ಅವರು ಬ್ಯಾಂಕ್‌ಗೆ ಹಾಕಿದಾಗ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು.

ಕೋರ್ಟ್ ಶಿಕ್ಷೆ ವಿಧಿಸಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಅವರು, ನನಗೆ ಕುಮಾರ್ ಸಾಲವನ್ನೇ ನೀಡಿರಲಿಲ್ಲ. ನನಗೆ ಸಮಸ್ಯೆ ಇದ್ದ ಕಾರಣ ಸಾಲ ಕೇಳಿದ್ದೆ. ಸಾಲ ಕೊಡುವುದಾಗಿ ಹೇಳಿ ದಿನಾಂಕ ನಮೂದಿಸದ ಚೆಕ್ ಪಡೆದಿದ್ದ. ನಂತರ ಸಾಲವನ್ನು ಕೊಡದೆ ಚೆಕ್‌ನ್ನು ಬ್ಯಾಂಕ್‌ಗೆ ಪ್ರೆಸೆಂಟ್ ಮಾಡಿದ್ದ. ನಂತರ ಚೆಕ್ ಬೌನ್ಸ್ ಮಾಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದ. ಈ ಸಂಬಂಧ ನನ್ನ ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದಿದ್ದಾರೆ.

About The Author

Leave a Reply