October 22, 2025
WhatsApp Image 2025-02-01 at 9.24.02 AM

ಮಂಗಳೂರು: ಇತ್ತೀಚಿಗೆ ಬಿಜೈನ ಸೆಲೂನ್‌ನಲ್ಲಿ ದಾಂಧಲೆ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ.

ಪೊಲೀಸರು ಪ್ರಸಾದ್ ಅತ್ತಾವರನ ಮೊಬೈಲ್ ಪರಿಶೀಲಿಸಿದಾಗ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಫೋಟೋಗೆ ಹಚ್ಚಿರುವ ವೀಡಿಯೋ ಪೊಲೀಸರಿಗೆ ಲಭ್ಯವಾಗಿದೆ.

ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಅವರು ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ. ಪ್ರಾಣಿಬಲಿ ಪೂಜೆ ಮಾಡಲು ಪ್ರಸಾದ್ ಅತ್ತಾವರ, ಅನಂತ್ ಭಟ್ ಎಂಬವರಿಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದ್ದು, ಈ ವಿಚಾರವಾಗಿ ಈ ಇಬ್ಬರ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

About The Author

Leave a Reply