November 8, 2025
WhatsApp Image 2025-02-04 at 12.09.52 PM

ಉಡುಪಿ: ಯುವತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ಯುವತಿ ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸವಿದ್ದ ಅಂಜುಬಾನು (28) ಎಂದು ಗುರುತಿಸಲಾಗಿದೆ.

ಅಂಜುಬಾನುರವರು 2024 ರ ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಉರ್ದು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

About The Author

Leave a Reply