
ಮಂಗಳೂರು: ನಗರದ ಬಿಜೈನಲ್ಲಿರುವ ಕಲರ್ ಯೂನಿಸೆಕ್ಸ್ ಮಸಾಜ್ ಪಾರ್ಲರ್ ದಾಳಿ ಪ್ರಕರಣದ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.



ರಾಮಸೇನಾ ಕರ್ನಾಟಕ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿಗೆ ಜಾಮೀನು ನೀಡಲಾಗಿದೆ. ಜನವರಿ 23ರಂದು ಮಂಗಳೂರಿನ ಬಿಜೈನಲ್ಲಿರುವ ಕಲರ್ಸ್ ಯುನಿಸೆಕ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ್ದ ರಾಮಸೇನಾ ಸಂಘಟನೆಯ ಕಾರ್ಯಕರ್ತರು ಅನೈತಿಕ ಚಟುವಟಿಕೆ ನಡೆಯುತ್ತಿರುವ ಎಂದು ಆರೋಪದ ಮೇಲೆ ದಾಂಧಲೆ ನಡೆಸಿದ್ದರು. ಈ ಬಗ್ಗೆ ಮಸಾಜ್ ಪಾರ್ಲರ್ ಮಾಲೀಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದಾಳಿಯ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಂಧಿತರಿಗೆ ಮಂಗಳೂರು 6ನೇ ಜೆಎಂಎಫ್‌ಸಿ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳ ಪರ ವಕೀಲರು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. 14 ಮಂದಿ ಆರೋಪಿಗಳಲ್ಲಿ ಜಾಮೀನು ಅರ್ಜಿ ಸಲ್ಲಿಸದ ಮೂರು ಮಂದಿ ಆರೋಪಿಗಳ ಹೊರತುಪಡಿಸಿ ನ್ಯಾಯಾಲಯವು 11 ಮಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ