ಮಂಗಳೂರು: ಸ್ನ್ಯಾಪ್ಚಾಟ್ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತನ್ನ ಸ್ನ್ಯಾಪ್ಚಾಟ್ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್ನ ಸ್ಕ್ರೀನ್ ರೆಕಾರ್ಡ್ ಮಾಡಿರುವ ವೀಡಿಯೋ ಫೈಲ್ ಅನ್ನು ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ಗೆ (ಎನ್ಸಿಸಿಆರ್ಪಿ) ದೂರು ನೀಡಿದ್ದಳು.ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ: ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಎಂಎಲ್ಸಿ ಐವನ್ ಡಿಸೋಜ ಅವರು ಧ್ವನಿ ಎತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,…
ಸಮಹಾದಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿಧ್ಯಾರ್ಥಿನಿ ಆಯಿಷತ್ ಶಿಫಾ ಕನ್ನಡ ಮಾಧ್ಯಮ ವಿಭಾಗದಲ್ಲಿ 588 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿಶೇಷತೆ…
ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ…