
ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.



ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 49 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 19 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಇದೀಗ ಮುನ್ನಡೆ ಸಾಧಿಸಿದ್ದಾರೆ. 254 ಮತಗಳಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ.
ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.