November 8, 2025
WhatsApp Image 2025-02-13 at 1.54.16 PM

ಮಂಗಳೂರು: ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಸಿಟಿವಿಎಸ್ ತಂಡವು ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನಗರಿ ಹಾಗೂ ಲೋಹದ ಚೈನ್ ಹೊರತೆಗೆಯುವ ಮೂಲಕ ಜೀವದಾನ ನೀಡಿದ ವೈದ್ಯರನ್ನು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ಈ ಪ್ರಕರಣ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

ವೆನ್ಲಾಕ್ ಆಸ್ಪತ್ರೆಯ ಹೃದ್ರೋಗ ವಿಭಾಗ ಮುಖ್ಯಸ್ಥ ಡಾ.ಸುರೇಶ್ ಪೈ ನೇತೃತ್ವದ ತಂಡ ಅಪೂರ್ವ ಶಸ್ತ್ರಚಿಕಿತ್ಸೆ ಮೂಲಕ ಬಾಲಕನಿಗೆ ಜೀವದಾನ ನೀಡುವ ಮೂಲಕ ದೇಶಕ್ಕೆ ಉತ್ತಮ ಸಂದೇಶ ನೀಡಿದೆ ಎಂದು ಶ್ಲಾಘಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಸುರೇಶ್ ಪೈ, ವೆನ್ಲಾಕ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಇಲ್ಲಿನ ಚಿಕಿತ್ಸೆ ಬಗ್ಗೆ ಯಾವುದೇ ಮುಜುಗರಬೇಡ. ಖಾಸಗಿ ಆಸ್ಪತ್ರೆಗೂ ಮೀರುವಂತಹ ಚಿಕಿತ್ಸೆ ಇಲ್ಲಿ ನೀಡಲಾಗುತ್ತದೆ. ಆದರೆ ಪ್ರಚಾರದಲ್ಲಿ ಹಿಂದೆ ಬಿದ್ದಿದ್ದೇವೆ ಎಂದರು.

ಈ ಸಂದರ್ಭ ಡಾ.ಸುರೇಶ್ ಪೈ, ಡಾ.ಸೂರಜ್ ಪೈ, ನರ್ಸಿಂಗ್ ಅಧಿಕಾರಿ ವಹೀದಾ, ಡಾ.ಪ್ರಣವ್, ಡಾ.ಶೂಭಂ ಗುಪ್ತಾ, ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಪ್ರಾದೇಶಿಕ ವೈದ್ಯಕೀಯ ಅಧಿಕಾರಿ ಡಾ.ಸುಧಾಕರ್, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಪ್ರಮೀಳಾ ಈಶ್ವರ್, ಶಶೀಧರ ಕೊಠಾರಿ, ಅನೀಲ್, ನಾಮನಿದೇಶೀತ ಪಾಲಿಕೆ ಸದಸ್ಯ ಸತೀಶ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್,  ಕಾರ್ಮಿಕ ಘಟಕದ ರಾಜ್ಯ ಪ್ರ.ಕಾರ್ಯದರ್ಶಿ ವಹಾಬ್‌ ಕುದ್ರೋಳಿ, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್, ಟಿ.ಸಿ.ಗಣೇಶ್, ಕಾರ್ಮಿಕ ಘಟಕದ ಮುಖಂಡರಾದ ಜಯರಾಜ್ ಅಂಚನ್, ಸೀತಾರಾಮ್ ಶೆಟ್ಟಿ, ನನೀತ್ ಶರಣ್ ಮತ್ತಿತರು ಉಪಸ್ಥಿತರಿದ್ದರು.

About The Author

Leave a Reply