
ಉಡುಪಿ: ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ದೇಶಾದ್ಯಂತ ಪ್ರತಿಭಟನೆಯ ಅಂಗವಾಗಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಯನ್ನು ಹರಿಯುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು.



ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮೂಳೂರ್ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ ಹಾಗೂ ಮುಸ್ಲಿಂ ವಿರೋಧಿ ಯಾಗಿದ್ದು ಅದನ್ನು ಎಸ್ ಡಿ ಪಿ ಐ ವಿರೋದಿಸುತ್ತದೆ ಎಂದು ಹೇಳಿದರು. ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಮ್ ಆದಿಉಡುಪಿ ಮಾತನಾಡಿ ,ಯಾವುದೇ ಕಾರಣಕ್ಕೂ ಈ ಕಾಯ್ದೆಯನ್ನು ಜಾರಿಗೆ ತರಲು ನಾವು ಬಿಡುವುದಿಲ್ಲ.
ಒಂದು ವೇಳೆ ಕೇಂದ್ರ ಸರಕಾರ ಈ ಕಾಯ್ದೆಯನ್ನ ವಾಪಸ್ ಪಡೆಯದೆ ಇದ್ದರೆ CAA-NRC ಮಾದರಿಯಲ್ಲಿ ಜನಾಂದೋಲನವನ್ನು ನಡೆಸಬೇಕಾಗುತ್ತದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಜಿಲ್ಲಾ ಉಪಾಧ್ಯಕ್ಷ ನಝೀರ್ ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.