
ಬೆಳ್ತಂಗಡಿ : ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.



ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಿನಲಸ್ಲಿ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಷ್ಟರಲ್ಲೇ ಅವರು ಸಾವನಪ್ಪಿದ್ದರು. ಹಿದಾಯತ್ ಮೊದಲು ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿ ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.