
ಮಂಗಳೂರು: ನಗರದ ಸಮೀಪ ಸುರತ್ಕಲ್ ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಸಂಭವಿಸಿದೆ.



ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು ಹೊಟೇಲಗೆ ಢಿಕ್ಕಿ ಹೊಡೆದಿದೆ. ಅಲ್ಲದೆ, ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೊ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಘಟನೆಯಿಂದ ಎರಡು ಆಟೊ ರಿಕ್ಷಾಗಳು, ಎರಡು ಕಾರು ಹಾಗೂ ಒಂದು ದ್ವಿಚಕ್ರ ವಾಹನ ಜಖಂಗೊಂಡಿದೆ ಎಂದು ತಿಳಿಯಲಾಗಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.