
ಕಾಂಗ್ರೆಸ್ ಮುಖಂಡ ಹಾಗೂ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾಗಿರುವ ಬಿಕೆ ಅಲ್ತಾಫ್ ಖಾನ್ ಅವರಿಗೆ ಅನಾಮಿಕ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆ ಬಂದಿದ್ದು, RSS ಚಮಚಾಗಿರಿ ಮಾಡಿದರೆ PFI ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಬಿಕೆ ಅಲ್ತಾಫ್ ಖಾನ್ ಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.



ಅಲ್ತಾಫ್ ಪರಿಚಯಸ್ಥ ಅಜ್ಮತ್ ಉಲ್ಲಾಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಅಲ್ತಾಫ್ ಕಾಂಗ್ರೆಸ್ ಮುಖಂಡರಾಗಿದ್ದು, ಹಾಗೂ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷರಾಗಿದ್ದಾರೆ. ಈ ಕುರಿತು ಜೆಜೆ ನಗರ ಠಾಣೆಗೆ ಬಿಕೆ ಅಲ್ತಾಫ್ ಖಾನ್ ದೂರು ನೀಡಿದ್ದಾರೆ. ಅಲ್ಲದೆ ಕೋರ್ಟ್ ನಲ್ಲಿರುವ ಕೇಸ್ ಗೂ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಫೆಬ್ರವರಿ 5ರಂದು ರಾತ್ರಿ 8 ಗಂಟೆ ಸುಮಾರಿಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಈ ಕುರಿತು ಜಯನಗರ ಠಾಣೆಯಲ್ಲಿ FIR ದಾಖಲಾಗಿದೆ.