
ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆಗಳನ್ನ ನೀಡಿದರು.



1) ಈ ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.
2) ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು.
3)ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು.
4) ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.
5) ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು
6) ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.