
ಮರಕ್ಕೆ ಕಾರುಡಿಕ್ಕಿಯಾಗಿ ಸ್ಥಳದಲ್ಲೆ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆ ಬಳಿ ತಡರಾತ್ರಿ ಈ ಒಂದು ಘಟನೆ ಸಂಭವಿಸಿದೆ.



ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಹಳ್ಳಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಮೃತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.