
ಹುಬ್ಬಳ್ಳಿ : ಮಕ್ಕಳಿಗೆ ಸೇರಬೇಕಾಗಿದ್ದ ಅನ್ನಕ್ಕೂ ಇದೀಗ ಕನ್ನ ಹಾಕಿದ್ದು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ ಸಣ್ಣ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ಗೋಧಿ, ಬೇಳೆ, ಬೆಲ್ಲ ಸೇರಿದಂತೆ ಪೌಷ್ಟಿಕ ಅಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅಧಿಕಾರಿಗಳು 26 ಜನರನ್ನು ಅರೆಸ್ಟ್ ಮಾಡಿದ್ದಾರೆ.



ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರು ಸೇರಿದಂತೆ ಒಟ್ಟು 26 ಜನರನ್ನು ಇದೀಗ ಹುಬ್ಬಳ್ಳಿಯ ಕೇಶ್ವಾಪುರ, ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಗಬ್ಬೂರ ಬಳಿ ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು. ಕಾಂಗ್ರೆಸ್ ನಾಯಕಿ ಬೈತುಲ್ಲಾ ಕಿಲ್ಲೆದಾರ್ ಪತಿ ಫಾರೂಕೆಗೆ ಈ ಒಂದು ಗೋದಾಮು ಸೇರಿತ್ತು.
ಗೋದಾಮಿನಲ್ಲಿ ಅಪಾರ ಪ್ರಮಾಣದ ಪೌಷ್ಟಿಕ ಆಹಾರ ಪತ್ತೆಯಾಗಿತ್ತು ಈ ಸಂಬಂಧ ಹುಬ್ಬಳ್ಳಿಯ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫಾರೂಕ್ ಸೇರಿ ಮೂವರು ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 26 ಜನರನ್ನು ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಪ್ರಕರಣ ಹಿನ್ನೆಲೆ?
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ ಸಣ್ಣ ಮಕ್ಕಳಿಗೆ ನೀಡುವ ಹಾಲಿನ ಪೌಡರ್, ಗೋಧಿ, ಬೇಳೆ, ಬೆಲ್ಲ ಸೇರಿದಂತೆ ಪೌಷ್ಟಿಕ ಅಹಾರಕ್ಕೆ ಕನ್ನ ಹಾಕಿ ಸಿಕ್ಕಿಬಿದ್ದಿದ್ದಾರೆ. ಪತಿ ಫಾರೂಕ್ ಜೊತೆ ಸೇರಿಕೊಂಡು ಗೋಡೌನ್ಲ್ಲಿ ಅಕ್ರಮವಾಗಿ ಫುಡ್ ಪಾಕೇಟ್ಗಳನ್ನು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಉಪ ವಿಭಾಗ ಅಧಿಕಾರಿ, ತಹಶಿಲ್ದಾರ್ ನೇತೃತ್ವದಲ್ಲಿ ಗಬ್ಬೂರಿನ ಪ್ಲಾಸ್ಟಿಕ್ ಸಂಗ್ರಹ ಮಾಡುವ ಹಳೇ ಗೋಡೌನ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಗೋಡೌನ್ನಲ್ಲಿ ರಾಶಿ ರಾಶಿ ಮೂಟೆಗಳು ಸಿಕ್ಕಿವೆ.
ಆರೋಪಿ ಕಿಲ್ಲೇದಾರ ಅಂಗನವಾಡಿ ಕಾರ್ಯಕರ್ತೆಯರ ಸಂಘ ಕಟ್ಟಿಕೊಂಡು ಓಡಾಡಿತ್ತಿದ್ದರು. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕಿಯಾಗಿ ಹೆಸರು ಮಾಡಿದ್ದರು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ದೂರಿನ ಮೇಲೆ ಬೈತೂಲ್ಲಾ ಕಿಲ್ಲೇದಾರ, ಪತಿ ಫಾರೂಕ್ ಹಾಗೂ ಕಾರು ಚಾಲಕ ಮತ್ತು ಕಾರು ಮಾಲೀಕರ ಮೇಲೆ ದೂರು ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆಯೇ ಬೈತೂಲ್ಲಾ ಕಿಲ್ಲೇದಾರ ನಾಪತ್ತೆಯಾಗಿದ್ದಾರೆ.ಆರೋಪಿ ಬೈತೂಲ್ಲಾ ಕಿಲ್ಲೇದಾರ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರ ಜೊತೆ ಫೋಟೋಗೆ ಪೋಸ್ ಕೊಟ್ಟು ಬಿಲ್ಡಪ್ ಕೊಟ್ಟುಕೊಂಡು ಓಡಾಡುತ್ತಿದ್ದುದೂ ತಿಳಿದುಬಂದಿದೆ. ಈಗ ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ.