ಪುತ್ತೂರು: ಲಾರಿ – ರಿಕ್ಷಾ ಡಿಕ್ಕಿ..! ಮೂವರು ಮಹಿಳೆಯರಿಗೆ ಗಾಯ..!

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ.

ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾ ಗಿದ್ದು ಸರೋಜಿನಿ ಅವರು ಗಂಭೀರ ಗಾಯಗೊಂದಿರುವುದಾಗಿ ತಿಳಿದು ಬಂದಿದೆ. ರಿಕ್ಷಾ ಚಾಲಕ ಅವಿನಾಶ್ ಅವರಿಗೂ ಸಣ್ಣ ಪುಟ್ಟ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

Leave a Reply