
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀಯರಿಗೆ ಸಂತಸದ ಸುದ್ದಿ ನೀಡಿದ್ದಾರೆ.



ಇನ್ನು ೮-೧೦ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ೩ ತಿಂಗಳ ಹಣ ಬಿಡುಗಡೆಯಾಗಲಿದೆ ಎಂದಿದ್ದಾರೆ. ಮುಂದಿನ ೮-೧೦ ದಿನಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗಲಿದೆ. ಅಪಘಾತದಿಂದ ೪೦ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರಿಂದ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಮಾಡುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ಬಾಕಿ ಇರುವ ಹಣವನ್ನು ೮-೧೦ ದಿನದೊಳಗೆ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದಿದ್ದಾರೆ.
ಹೊಸ ಮಾದರಿಯಲ್ಲಿ ಗೃಹ ಲಕ್ಷ್ಮಿಯ ಹಣ ಜಮಾ ಆಗುತ್ತಿದೆ. ಬೆಂಗಳೂರು ಸುತ್ತಮುತ್ತಲಿನ ೫ ತಾಲ್ಲೂಕು ಪಂಚಾಯಿತಿಗಳಿಗೆ ಹಣ ನೀಡಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಯಿತು. ಸರಿಯಾಗಿ ಒಂದು ವಾರ ೧೦ ದಿನದೊಳಗೆ ಗೃಹ ಲಕ್ಷ್ಮಿಯ ಹಣ ಬಿಡುಗಡೆ ಮಾಡಲಾಗುವುದು ಎಂದರು.