ICC Champions Trophy 2025: ನಾಳೆ ಭಾರತ- ಪಾಕ್‌ ನಡುವೆ ಹಣಾಹಣಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿ ಯಲ್ಲಿ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಾಳೆ (ಫೆ.23, ಭಾನುವಾರ) ಮಧ್ಯಾಹ್ನ 2.30ಕ್ಕೆ (ಭಾರತೀಯ ಕಾಲಮಾನ) ಸರಿಯಾಗಿ ಪಂದ್ಯ ಆರಂಭವಾಗಲಿದೆ.

ಈ ಹಿಂದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು ಐದು ಬಾರಿ ಮುಖಾಮುಖಿಯಾಗಿವೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಬಾರಿಯ ಚಾಂಪಿಯನ್ (2002, 2013) ಭಾರತದ ವಿರುದ್ಧ ಪಾಕಿಸ್ತಾನ ಮೇಲುಗೈ ಸಾಧಿಸಿದ್ದು, 3-2ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ.

2004ರಲ್ಲಿ ಇಂಗ್ಲೆಂಡ್ ಆತಿಥ್ಯದಲ್ಲಿ ಬರ್ಮಿಂ ಗ್ಹ್ಯಾಮ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು.

 

Leave a Reply