November 24, 2025
puttur
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ ಬಯಲಾಗಿದ್ದು, ಖಾಸಗಿ ಆಸ್ಪತ್ರೆಯ ವಿರುದ್ಧ ಬಾಣಂತಿಯ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ.ಹೌದು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು ಹೆರಿಗೆಗಾಗಿ ದಾಖಲಾಗಿದ್ದರು. ಅವರಿಗೆ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿತ್ತು ಬಳಿಕ ಮಹಿಳೆಗ ವಿಪರೀತ ಜ್ವರದಿಂದ ಬಳಲಿದ್ದರು ಈ ಬಗ್ಗೆ ಮಹಿಳೆಯ ಕುಟುಂಬದವರು ಹರಿಗೆ ಮಾಡಿಸಿದ ವೈದ್ಯ ಡಾ ಅನಿಲ್ ಬಳಿ ವಿಚಾರಿಸಿದ್ದರು ಜ್ವರದ ಔಷಧಿ ನೀಡುವಂತೆ ವೈದ್ಯರು ಸೂಚಿಸಿದ್ದರು.ಅದಾದ ನಂತರ ಬಾಣಂತಿಯ ಸಮಸ್ಯೆ ಕಡಿಮೆಯೇ ಆಗದಿರುವುದರಿಂದ ಬಾಣಂತಿಯ ಕುಟುಂಬದವರು ಮಂಗಳೂರಿನ ವೈದ್ಯರನ್ನು ಸಂಪರ್ಕಿಸಿದ್ದರು. ಅಲ್ಲಿ ಸ್ಕ್ಯಾನಿಂಗ್ ರಿಪೋರ್ಟ್ ನೋಡಿದ ವೈದ್ಯರಿಗೆ, ಮಾರ್ಚ್ ಫಾರ್ಮೇಶನ್ ಆಗಿರುವುದು ಕಂಡುಬಂದಿದ್ದು, ಪುತ್ತೂರಿನ ವೈದ್ಯರ ಬಳಿ ಪ್ರಶ್ನಿಸಿದ್ದರು. ನಂತರ ಸಿಟಿ ಸ್ಕ್ಯಾನ್ ಮಾಡಿದಾಗ ವರದಿಯಲ್ಲಿ ಹೊಟ್ಟೆ ಒಳಗಡೆ ಸರ್ಜಿಕಲ್ ಬಟ್ಟೆ ಬಿಟ್ಟಿರುವ ವಿಚಾರ ತಿಳಿದು ಬಂದಿದೆ. ನಂತರ ಪುತ್ತೂರಿನ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಿ ಸರ್ಜಿಕಲ್ ಬಟ್ಟೆಯ ಮುದ್ದೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಸದ್ಯ ಡಾ ಅನಿಲ್ ವಿರುದ್ಧ ಬಾಣಂತಿಯ ಪತಿ ಗಗನ್ ದೀಪ್ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ

About The Author

Leave a Reply