
ಮಂಗಳೂರು: ವಾಹನವೊಂದು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಳ ಘಟನೆ ಮಂಗಳೂರಿನ ಕೆಎಸ್‌ಆರ್‌ಟಿಸಿ ಜಂಕ್ಷನ್ ಬಳಿ ನಡೆದಿದೆ.



ಬಳ್ಳಾರಿಯ ಮಲ್ಲರೆಡ್ಡಿ (46) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸರಿಸುಮಾರು ರಾತ್ರಿ 7.25ಕ್ಕೆ ತನ್ನ ಪತ್ನಿಯೊಂದಿಗೆ ಕೆಎಸ್‌ಆರ್‌ಟಿಸಿ ಜಂಕ್ಷನ್ ಕಡೆಯಿಂದ ಲಾಲ್‌ಭಾಗ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ತಕ್ಷಣ ಮಲ್ಲರೆಡ್ಡಿಯನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದುರಾದೃಷ್ಡವಶಾತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆರೋಪಿ ವಾಹನ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಆರೋಪಿಯ ಹುಡುಕಾಟಕ್ಕೆ ತೀವ್ರ ತನಿಖೆ ನಡೆಯುತ್ತಿದೆ. ಈ ಘಟನೆ ಕುರಿತು ಸಂಚಾರ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.