
ಇತ್ತೀಚೆಗೆ ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಸಲು, ಬಡಿಸಲು ಮತ್ತು ಪ್ಯಾಕ್ ಮಾಡಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿದೆ.



ಈ ಪ್ಲಾಸ್ಟಿಕ್ ಗಳು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ
ನೀಡಿದ್ದರು. ಈ ಹಿನ್ನೆಲೆ ಆಹಾರ ಹಾಗೂ ಗುಣಮಟ್ಟ ಇಲಾಖೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹೋಟೆಲ್ ಹಾಗೂ ತಿಂಡಿಗಳ ಅಂಗಡಿಗಳಿಂದ 500ಕ್ಕೂ ಹೆಚ್ಚು ಇಡ್ಲಿ ಮಾದರಿ ಸಂಗ್ರಹ ಮಾಡಿದ್ದು ಇವುಗಳಲ್ಲಿ 35 ಕ್ಕೂ ಹೆಚ್ಚು ಸ್ಯಾಂಪಲ್ಸ್ ಅಸುರಕ್ಷಿತ ಎಂಬ ವರದಿ ಬಂದಿದೆ.