November 12, 2025
kaadar

ಮಂಗಳೂರು : ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವಂತಹ ‘ಶಕ್ತಿ ಯೋಜನೆ’ ಕೂಡ ಒಂದಾಗಿದೆ. ಇದು ಜಾರಿಯಾದ ಬಳಿಕ ಬಸ್ಸಿನಲ್ಲಿ ಪೂರ್ತಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ. ಪುರುಷರಿಗೆ ನಿಲ್ಲಲೂ ಜಾಗ ಇರದಂತಹ ದುರಂತ ಎದುರಾಗುತ್ತಿದೆ. ಈ ಹಿನ್ನೆಲೆ ಪುರುಷರಿಗೂ ಕೂಡ ಉಚಿತ ಪ್ರಯಾಣ ನೀಡಬೇಕೆಂದು ಹಲವರು ಆಗ್ರಹಿಸಿದ್ದರು. ಈ ಕುರಿತು ಇದೀಗ ಸರ್ಕಾರ ಸದ್ಯದಲ್ಲೇ ಶುಭ ಸುದ್ದಿ ನೀಡುವ ಸೂಚನೆ ದೊರಕುತ್ತಿದೆ.

ರಾಜ್ಯ ಸರ್ಕಾರ ಪುರುಷರಿಗೂ ಕೂಡ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಲು ಚಿಂತನೆ ನಡೆಸುತ್ತಿದೆ. ಆದರೆ, ಈ ಭಾಗ್ಯ ಎಲ್ಲರಿಗೂ ಲಭ್ಯವಾಗುವುದಿಲ್ಲ. ಕೇವಲ ಕಿಡ್ನಿ ಸಮಸ್ಯೆ ಹಾಗೂ ಡಯಾಲಿಸಿಸ್ ಗೆ ಒಳಗಾಗುತ್ತಿರುವ ರೋಗಿಗಳಿಗೆ ಫ್ರೀ ಬಸ್ ವ್ಯವಸ್ಥೆ ಮಾಡಲಾಗುವುದು ಎಂಬ ಸುದ್ದಿ ಹರಿದಾಡುತ್ತಿದೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಮನವಿ ಸಲ್ಲಿಸಿದ್ದಾರೆ. ಸಿಎಂ ಅದನ್ನು ಪುರಸ್ಕರಿಸಿದರೆ ಇನ್ನು ಮುಂದೆ ಕಡ್ನಿ ಸಮಸ್ಯೆ ಹಾಗೂ ಡಯಾಲಿಸಿಸ್‌ನಿಂದ ಬಳಲುತ್ತಿರುವ ಪುರುಷರಿಗೂ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಸಿಗಲಿದೆ.

ಸಿದ್ದರಾಮಯ್ಯನಿಗೆ ಯುಟಿ ಖಾದರ್‌ ಪತ್ರ!
ʼರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್‌ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕುʼ ಅಂತಾ ಸಿಎಂ ಸಿದ್ದರಾಮಯ್ಯನಿಗೆ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ. ಸ್ಪೀಕರ್ ಖಾದರ್ ಅವರ ಈ ನಡೆಗೆ ಕರಾವಳಿ ಜನತೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದೆ.

About The Author

Leave a Reply