November 8, 2025
WhatsApp Image 2025-03-02 at 8.55.34 AM (1)

ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮನ್ಸೂದ್ ಇಮ್ರಾನ್ ರಶಾದಿ ತಿಳಿಸಿದರು.

ಶುಕ್ರವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಸ್‌ ಬೋರ್ಡ್‌ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಂದ್ರ ದರ್ಶನದ ಬಗ್ಗೆ ಲಭ್ಯವಾದ ಮಾಹಿತಿ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.ಶನಿವಾರದಿಂದ ತರಾವೀಹ್ ನಮಾಝ್ ಹಾಗೂ ರವಿವಾರ ಮೊದಲ ಉಪವಾಸ ಆಚರಿಸಲಾಗುವುದು ಎಂದು ಮನ್ಸೂದ್ ಇಮ್ರಾನ್ ತಿಳಿಸಿದರು.ಸಭೆಯಲ್ಲಿ ಮುಪ್ತಿ ಇಫಿಖಾರ್ ಅಹ್ಮದ್ ಖಾಸ್ಮಿ ಮೌಲಾನಾ ಏಜಾಝ್ ಅಹ್ಮದ್ ನದ್ವಿ, ಮೌಲಾನಾ ಅಬ್ದುಲ್ ಖಾದಿರ್ ವಾಜಿದ್, ಮೌಲಾನಾ ಸೈಯದ್ ಮನ್ಸೂರ್ ರಝಾ ಆಬಿದಿ ಹಾಗೂ ಮೌಲಾನಾ ಖಾರಿ ಝುಲ್ಸಿಖಾರ್ ರಝಾ ನೂರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About The Author

Leave a Reply