October 23, 2025
crime news

ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು.

ಇಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದಿದೆ.

ಕೂಡಲೇ ಸಿಬ್ಬಂದಿಗಳು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ ವಿಟ್ಲ ಸರಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ.

About The Author

Leave a Reply