October 12, 2025
WhatsApp Image 2025-03-04 at 9.10.07 AM

ಕಾಸರಗೋಡು: ಮಂಜೇಶ್ವರದ ವಾಮಂಜೂರಿನಲ್ಲಿ ಸೋಮವಾರ ತಡ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.

ಉಪ್ಪಳ ಪೈವಳಿಕೆ ಸಮೀಪದ ಬಾಯಿಕಟ್ಟೆ ನಿವಾಸಿಗಳಾದ ಜನಾರ್ದನ, ವರುಣ್ ಮತ್ತು ಕೃಷ್ಣ ಮೃತಪಟ್ಟವರು.
ಉಪ್ಪಿನಂಗಡಿ ಮೂಲದ ರತನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳೀಯರ ಪ್ರಕಾರ, ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು. ಈ ಕಾರಣದಿಂದಾಗಿ ಚಾಲಕನಿಗೆ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply