
ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್ನಲ್ಲಿ (Karnataka Budget 2025) ಘೋಷಣೆ ಮಾಡಿದರು.



ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.