
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ನಾಡಿನ ಪ್ರಗತಿ, ಸಮೃದ್ಧಿ ಹಾಗೂ ಸ್ವಾವಲಂಬನೆಗೆ ಪೂರಕವಾಗಿದೆ. ಎಲ್ಲಾ ವರ್ಗಗಳ ಶ್ರೇಯೋಭಿವೃದ್ದಿಯ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಹಿಡಿದ ಕನ್ನಡಿಯಾಗಿದೆ.
ವಿಶೇಷವಾಗಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಈ ಯೋಜನೆಗಳು ಪ್ರಾದೇಶಿಕವಾಗಿ ಆರೋಗ್ಯ, ಶಿಕ್ಷಣ, ಮೀನುಗಾರಿಕೆ, ಪ್ರವಾಸೋದ್ಯಮ, ಮೂಲಸೌಕರ್ಯ, ಪರಿಸರ ಸಂರಕ್ಷಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಒಳಗೊಂಡಿದ್ದು, ಕರಾವಳಿಯ ಪ್ರಗತಿಗೆ ಹೊಸ ದಿಕ್ಕು ನೀಡಲಿವೆ.


