
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ ಕಳೆದ 12 ದಿನಗಳಿಂದ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಇಂದು ಬಂಟ್ವಾಳ ತಾಲೂಕಿನ ಸುತ್ತಮುತ್ತಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಇದೀಗ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಡಿ ಮಾರ್ಟ್ ನಲ್ಲಿ ಕೊನೆಗೂ ಪತ್ತೆಯಾಗಿದ್ದಾನೆ.



ದಿಗಂತ್ ಗಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು.ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ಮೊದಲಿಗೆ ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ನೇತ್ರಾವತಿ ನದಿ ಭಾಗದ ಸುತ್ತಲಿನ ಭಾಗದಲ್ಲಿ ದೋಣಿ ಬಳಸಿಕೊಂಡು ನದಿಯಲ್ಲೂ ಕೂಡ ಸರ್ಚ್ ಮಾಡಲಾಗಿತ್ತು. ಇದೀಗ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಡಿ ಮಾರ್ಟ್ ನಲ್ಲಿ ಇದೀಗ ಕೊನೆಗೂ ಪತ್ತೆಯಾಗಿದ್ದಾನೆ. ಇದೀಗ ದಿಗಂತ್ ತಾನು ದ್ವಿತೀಯ ಪಿಯುಸಿ ಪರೀಕ್ಷೆಯ ಭಯದಿಂದ ಮನೆ ಬಿಟ್ಟಿದ್ದಾಗಿ ಪೊಲೀಸರ ಮುಂದೆ ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ.
ನಾಪತ್ತೆಯಾದ ದಿನ ಮನೆಯ ಸಮೀಪ ರೈಲ್ವೆ ಹಳಿ ಬಳಿ ಹೋಗಿ ಅಲ್ಲಿ ಚಪ್ಪಲಿ ಬಿಟ್ಟು ಬೇರೆ ಶೂ ಹಾಕಿಕೊಂಡು ಪರಾರಿಯಾಗಿದ್ದ. ಬೈಕ್ ನಲ್ಲಿ ಮಂಗಳೂರು ತಲುಪಿದ್ದ ಬಾಲಕ ದಿಗಂತ್ ಬಸ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ಮೈಸೂರಿಗೆ ಪ್ರಯಾಣ ಬೆಳೆಸಿದ್ದ. ಮೈಸೂರಿನಿಂದ ರೈಲಿನಲ್ಲಿ ಬೆಂಗಳೂರಿಗೆ ತೆರಳಿದ್ದ. ಅಲ್ಲಿಂದ ನಂದಿಬೆಟ್ಟಕ್ಕೆ ಹೋಗಿ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಬಳಿಕ ವಿವಿಧ ಕಡೆ ಸುತ್ತಾಟ ನಡೆಸಿದ್ದ. ಅಲ್ಲಿಂದ ಉಡುಪಿಗೆ ಆಗಮಿಸಿ ಡಿ ಮಾರ್ಟ್ ಗೆ ಬಂದು ಪತ್ತೆಯಾಗಿದ್ದ.