October 13, 2025
WhatsApp Image 2025-03-09 at 11.10.21 AM

ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದೆ.

ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

About The Author

Leave a Reply