ಕಟ್ಟಡ ಕುಸಿದು ಮೂವರು ಮಹಿಳೆ ಸೇರಿ ನಾಲ್ವರು ಸಾವು

 ಕಟ್ಟಡವೊಂದು ಕುಸಿತಗೊಂಡ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದಂತ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಬೀದಿ ಬದಿಯ ವ್ಯಾಪಾರಿ ಆಶಾ, ದೀಪಾ ಎಂದು ಗುರುತಿಸಲಾಗಿದೆ. ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ.

ಇನ್ನೂ ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Leave a Reply