November 8, 2025
WhatsApp Image 2025-03-10 at 9.39.33 AM

ಕಾಸರಗೋಡು : ಇತ್ತೀಚಿಗೆ ಅಟೋ ಚಾಲಕನ ಜೊತೆ ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿತ್ತು. ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದೀಗ ಅಚ್ಚರಿಯೆಂಬಂತೆ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಸಮೀಪ 15 ವರ್ಷದ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಪ್ರದೀಪ್(42) ಶವ ಪತ್ತೆಯಾಗಿದೆ. ಪ್ರದೀಪ್‌ನ ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10.30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ. ಫೆಬ್ರವರಿ 11ರಂದು ರಾತ್ರಿ ಪ್ರದೀಪ್ ಮತ್ತು ಅಪ್ರಾಪ್ತ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಕುಂಬಳೆ ಪೊಲೀಸರಿಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಇದರ ಆಧಾರದಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು ಆದರೆ ಅವರು ಪತ್ತೆಯಾಗಿರಲಿಲ್ಲ. ಪೋಷಕರು ಹೈಕೋರ್ಟ್ ಮೊರೆ ಹೋಗಿ ಹೇಬಿಯಸ್ ಕಾರ್ಪಸ್‌ಗೆ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಹುಡುಕಾಟ ನಡೆಸಿದಾಗ ಆಕೆಶಿಯಾ ಅರಣ್ಯದಲ್ಲಿ ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿವೆ. ಈ ಸಾವಿನ ಹಿಂದಿನ ಕಾರಣ ನಿಗೂಢವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply